Bidar DCC Bank Recruitment 2025 : ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಬೀದರ್ ಇದರಲ್ಲಿ ಖಾಲಿ ಇರುವ ಮುಖ್ಯ ಪ್ರಧಾನ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ : ಮುಖ್ಯ ಪ್ರಧಾನ ವ್ಯವಸ್ಥಾಪಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೀದರ್ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ, ಹಣಕಾಸು ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ/ ಪಿಜಿ ಮಾಸ್ಟರ್ಸ್ (ಎಂ.ಕಾಂ, ಎಮ್.ಬಿ.ಎ, ಎಮ್.ಎ ಅರ್ಥಶಾಸ್ತ್ರ) ಹೊಂದಿರಬೇಕು.
ಉದ್ಯೋಗ ಮಾಹಿತಿ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ 2025
ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 65 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ : ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಆಕರ್ಷಕ ವೇತನ ನೀಡಲಾಗುತ್ತದೆ.
ಅನುಭವ : ಕನಿಷ್ಠ 10 ರಿಂದ 15 ವರ್ಷಗಳ ಬ್ಯಾಂಕಿಂಗ್, ಹಣಕಾಸು ಅಥವಾ ನಿರ್ವಹಣಾ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಬರೋಡದಲ್ಲಿ ನೇಮಕಾತಿ 2025
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಪಿಡಿಎಫ್ ಸ್ವರೂಪದಲ್ಲಿ ಇ-ಮೇಲ್ ಮುಖಾಂತರ ಅಥವಾ ಅಂಚೆ ಮುಖಾಂತರ ಅಥವಾ ಖುದ್ದಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಬೀದರ ಕೇಂದ್ರ ಕಚೇರಿ ಬಸವೇಶ್ವರ ಚೌಕ ಬೀದರ್ – 585 401
dccbank_bdr@yahoo.co.in
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 2000
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ, ಪ್ರ1, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 1000
ಶುಲ್ಕ ಪಾವತಿಸುವ ವಿಧಾನ : ಡಿಮ್ಯಾಂಡ ಡ್ರಾಫ್ಟ್ (ಡಿಡಿ) ಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಬೀದರ ಇವರ ಹೆಸರಿನ ಮೇಲೆ ನೀಡಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 19, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 06, 2025
Bidar DCC Bank Recruitment 2025 : Important Links